ಫರಂಗಿಪೇಟೆ: ಲಾರಿ ಹರಿದು ಬೈಕ್‌ ಸವಾರ ಸಾವು..!

ಬಂಟ್ವಾಳದ ಫರಂಗಿಪೇಟೆ ಸಮೀಪದ ಮಾರಿಪಳ್ಳ ಸುಜೀರ್‌ಕ್ರಾಸ್‌ನಲ್ಲಿ ಲಾರಿ ಹರಿದು ಬೈಕ್‌ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಉತ್ತರಪ್ರದೇಶ ಮೂಲದ ಸವಾರ ಸೋನು (19) ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸಹಸವಾರ ಕಾರ್ಕಳ ನಿವಾಸಿ ಪ್ರಸಾದ್‌ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಲಾರಿ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸವಾರರಿಬ್ಬರು ನೆಲ್ಯಾಡಿಯ ಹೊಟೇಲೊಂದರ ಕಾರ್ಮಿಕರಾಗಿದ್ದು, ಅಲ್ಲಿಂದ ಮಂಗಳೂರಿಗೆ ತೆರಳುತ್ತಿರುವಾಗ ಘಟನೆ ನಡೆದಿದೆ. ಮೃತ ಸವಾರನ ಸಂಬಂಧಿಕರು ಉತ್ತರಪ್ರದೇಶದಿಂದ ಬರಬೇಕಿದ್ದು, ಈ ಹಿನ್ನೆಲೆಯಲ್ಲಿ ಮೃತದೇಹವನ್ನು ವೆನ್ಲಾಕ್‌ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನವೀನ ಹಳೆಯದು
WhatsApp Join our 'Shan Media News' WhatsApp group - Join Now ×