ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್ ಗಡ್ಕರಿ

 


ಮುಂಬೈ: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

ನಾಸಿಕ್ ಮಾತನಾಡಿದ ಅವರು, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು. ಅದರಲ್ಲಿನ ಸೆಕ್ಷನ್ ಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ತರಬಹುದಷ್ಟೆ. ಕಾಂಗ್ರೆಸ್ ಸಂವಿಧಾನವನ್ನು 80 ಬಾರಿ ತಿದ್ದುಪಡಿ ಮಾಡಿದೆ. ಅದರ ಹೊರತಾಗಿಯೂ, ನಾವು (ಬಿಜೆಪಿ) ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.





ನವೀನ ಹಳೆಯದು
WhatsApp Join our 'Shan Media News' WhatsApp group - Join Now ×