ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

 


ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಮತ್ತು ಮುಂದಿನ 6 ದಿನಗಳಲ್ಲಿ ಕರ್ನಾಟಕದ ಒಳನಾಡಿನಲ್ಲೂ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಮಾಹಿತಿ ನೀಡಿದೆ.

ಇಂದಿನಿಂದ (ಶನಿವಾರ) ಮೇ 16ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ತಡರಾತ್ರಿ ಗಾಳಿ ಮಳೆಯಾಗಿದ್ದು, ಹಲವೆಡೆ ಮಳೆ ಅಬ್ಬರ ಜೋರಾಗಿದೆ. ಆರ್‌.ಆರ್. ನಗರ ಜ್ಞಾನಭಾರತಿ, ಏಪೋರ್ಟ್‌ ರಸ್ತೆ, ಸುಂಕದಕಟ್ಟೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿದಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×