ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಲ್ಲಿ ಶುಕ್ರವಾರ ಎರಡು ಕಾರುಗಳು ಲಾರಿಗೆ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಒಂದು ಕಾರು ಚಿತ್ರದುರ್ಗದ ಕುಟುಂಬಕ್ಕೆ ಸೇರಿದೆ. ತೀರ್ಥಯಾತ್ರೆಗೆಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ತೆರಳಿದ್ದರು.
ಮಂಜುನಾಥನ ಪೂಜೆ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದಾಗ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ.