ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರ ಪ್ರಯತ್ನದಿಂದ ಆರಂಭವಾದ ನ್ಯೂಪಡ್ಪು ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ (NSS) ಶಿಬಿರ ನಡೆಯುತ್ತಿತ್ತು. ಅಲ್ಲಿಗೆ ನ್ಯೂಪಡ್ಪು ನಿವಾಸಿ ಸಿದ್ದೀಕ್ - ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಎಂಬ 3ನೇ ಕ್ಲಾಸ್ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು.
ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
