ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿ ಬಸ್ ಗೆ ಡಿಕ್ಕಿ ಹೊಡೆದ ಲಾರಿ: ಎಂಟು ಮಂದಿಗೆ ಗಾಯ-ಘಟನೆ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆ

ಬಂಟ್ವಾಳ: ಲಾರಿಯೊಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಕೆ.ಎಸ್ .ಆರ್. ಟಿ.ಸಿ.ಬಸ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ.

ಬಿಸಿರೋಡು – ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪದ ಕಾರಿಂಜ ಕಾಡಬೆಟ್ಟು ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಬಸ್ ಗೆ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಬಸ್ ಚಾಲಕ , ಅದರಲ್ಲಿದ್ದ ಪ್ರಯಾಣಿಕರು ಹಾಗೂ ಲಾರಿ ಚಾಲಕನಿಗೆ ಗಾಯವಾಗಿದೆ.

ಲಾರಿ ಚಾಲಕ ಚಿತ್ರದುರ್ಗ ಸಮೀಪದ ಹಿರಿಯೂರಿ‌ನ ಮಹೇಶ್ ,ಬಸ್ ಚಾಲಕ ಉಮೇಶ್, ಪ್ರಯಾಣಿಕರಾದ ನಳಿನಿ ಬೆಳ್ತಂಗಡಿ, ವಿದ್ಯಾರ್ಥಿ‌ನಿ ಮಧುರಾ ಇರ್ವತ್ತೂರು,ರಕ್ಷಣ್ ವೇಣುಗೋಪಾಲ ಕಾವಳಪಡೂರು, ತಾರಾನಾಥ ಗರ್ಡಾಡಿ, ರೋಹಿಣಿ ಮದ್ದಡ್ಕ ಗಾಯಗೊಂಡಿದ್ದಾರೆ
ನವೀನ ಹಳೆಯದು
WhatsApp Join our 'Shan Media News' WhatsApp group - Join Now ×