ಹೃದಯ ವಿದ್ರಾವಕ ಘಟನೆ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು!

 


ಚಿಕ್ಕೋಡಿ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲಾದ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ ಅಮರ್ ಕಾಂಬಳೆ (27), ಬೆಳಗಾವಿಯ ಅಥಣಿಯ ರೇಷ್ಮಾ ದಿಲೀಪ್ (34) ಮತ್ತು ಯಶ್ ದಿಲೀಪ್ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಈಗಾಗಲೇ ನಾಲ್ವರ ಮೃತದೇಹ ಪತ್ತೆಯಾಗಿದೆ. ಯಶ್ ದಿಲೀಪ್ ನ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.

ನಾಲ್ವರು ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಶುಕ್ರವಾರ ರಾತ್ರಿ ಆನೂರು ಗ್ರಾಮದಲ್ಲಿನ ಅತಿಥಿ ಗೃಹದಲ್ಲಿ ಇವರು ತಂಗಿದ್ದರು. ಬೆಳಿಗ್ಗೆ ಪಕ್ಕದ ಗ್ರಾಮ ಬಸ್ತೆವಾಡದಲ್ಲಿನ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ವರದಿಗಳ ಪ್ರಕಾರ, ಮೊದಲು ಇಬ್ಬರು ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ಇವರನ್ನು ರಕ್ಷಿಸಲು ಮುಂದಾದ ಇತರರು ಕೂಡ ನೀರುಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.



ನವೀನ ಹಳೆಯದು
WhatsApp Join our 'Shan Media News' WhatsApp group - Join Now ×