New Law implementation: ದೇಶದಲ್ಲಿ ಕಾನೂನುಗಳ ಪರಿಷ್ಕರಣೆ ಹಾಗೂ ಹೊಸ ಕಾನೂನುಗಳ ಜಾರಿಗೆ ಸಂಬಂಧಿಸಿದಂತೆ ಜುಲೈ 1ರಿಂದ ಮೂರು ಹೊಸ ಕಾಯ್ದೆಗಳು(3New Law) ಅನುಷ್ಠಾನಗೊಳ್ಳಲಿವೆ. ಎಲ್ಲಾ ಪೊಲೀಸ್ ಅಧಿಕಾರಿಗಳು(police officers) ನೂತನ ಕಾನೂನುಗಳ ಬಗ್ಗೆ ಸಮರ್ಪಕವಾಗಿ ತಿಳಿದುಕೊಳ್ಳಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ದೇಶದಾದ್ಯಂತ ಈಗಾಗಲೇ ಜಾರಿಯಲ್ಲಿರುವ ಸಿ.ಆರ್.ಪಿ.ಸಿ(CRPC), ಐಪಿಸಿ(IPC), ಮತ್ತು ಸಾಕ್ಷ್ಯ ಕಾಯ್ದೆಗಳ ಬದಲಾಗಿ(IEA), ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ, ಭಾರತೀಯ ಸಾಕ್ಷ್ಯ ಸಂಹಿತೆ ಹಾಗೂ ಭಾರತೀಯ ನ್ಯಾಯ ಸಂಹಿತೆಯನ್ನು ರಚಿಸಲಾಗಿದೆ.
