ಕುಂದಾಪುರ: ಕುಂದಾಪುರ ಸರ್ಕಾರಿ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿಯ ವಿರುದ್ಧ ವೈದ್ಯೆಗೆ ಮಾನಸಿಕ, ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡಿದ ಕುರಿತು ಪ್ರಕರಣ ದಾಖಲಾಗಿದೆ.
ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಕರ್ತವ್ಯಕ್ಕೆ ಹೊಸದಾಗಿ ಸೇರಿದ ವೈದ್ಯೆಗೆ ಕಳೆದ 8 ತಿಂಗಳಿನಿಂದ ವಾಟ್ಸಾಪ್‌ನಲ್ಲಿ ತಡರಾತ್ರಿ ನಿರಂತರ ಅಶ್ಲೀಲ ಚಾಟ್‌ಗಳನ್ನು ಮಾಡುತ್ತಾ, ಸ್ಟೇಟಸ್‌ನ ಫೋಟೊಗಳನ್ನು ಸೇವ್ ಮಾಡಿ ಅದಕ್ಕೆ ಅಶ್ಲೀಲ ಕಮೆಂಟ್‌ಗಳನ್ನು ಕಳುಹಿಸಿ, ದುಬಾರಿ ಹೊಟೇಲ್‌ಗೆ ಕರೆದೊಯ್ಯುತ್ತೇನೆ ಎಂದು ಕರೆಯುತ್ತಿದ್ದರು ಎಂದು ವೈದ್ಯೆ ಆರೋಪಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ಡಾ. ರಾಬರ್ಟ್ ರೆಬೆಲ್ಲೋ ಮೇಲೆ ಸಾರ್ವಜನಿಕರಿಂದ ಹಾಗೂ ಸಹ ಸಿಬ್ಬಂದಿ, ವೈದ್ಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಡೆದ ತನಿಖೆ ಆಧಾರದಲ್ಲಿ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಕರ್ತವ್ಯದಿಂದ ವಜಾಗೊಳಿಸಿ ಡಿಸಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಕುಂದಾಪುರ ಆಸ್ಪತ್ರೆಗೆ ಡಾ. ಲತಾ ಅವರನ್ನು ವೈದ್ಯಾಧಿಕಾರಿಯಾಗಿ ನೇಮಿಸಿ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
