ಕ್ರಿಕೆಟಿಗ ಯೂಸುಫ್ ಪಠಾಣ್ (Yusuf Pathan) ಕೂಡ 2024ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ತಮ್ಮ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಭರ್ಜರಿ ಫೈಪೋಟಿ ನೀಡುವ ಮೂಲಕ ಗೆಲುವು ದಾಖಲಿಸಿದ್ದಾರೆ.
ಪಶ್ಚಿಮ ಬಂಗಾಳದ ಬಹ್ರಂಪುರ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ (AITC) ಅಭ್ಯರ್ಥಿ ಯೂಸುಫ್ ಪಠಾಣ್ ಸ್ಪರ್ಧಿಸಿದ್ದರು. ಬಹರಂಪುರ ಲೋಕಸಭಾ ಕ್ಷೇತ್ರದ 15ನೇ ಸುತ್ತಿನ ಮತ ಎಣಿಕೆ ಮುಗಿದಾಗ ತೃಣಮೂಲ ಕಾಂಗ್ರೆಸ್ ಪ್ರಥಮ, ಬಿಜೆಪಿ ದ್ವಿತೀಯ ಹಾಗೂ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ತೃತೀಯ ಸ್ಥಾನ ಪಡೆದಿದ್ದರು. ಈ ಮೂಲಕ ಯೂಸಫ್ ಪಠಾಣ್ ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೊದಲ ಬಾರಿಗೆ ಪಾರ್ಲಿಮೆಂಟ್ ಮೆಟ್ಟಿಲು ಹತ್ತಲಿದ್ದಾರೆ.
15ನೇ ಹಂತದ ಫಲಿತಾಂಶದ ಅಂತ್ಯಕ್ಕೆ ತೃಣಮೂಲ ಕಾಂಗ್ರೆಸ್ 522780, ಬಿಜೆಪಿ 379076, ಕಾಂಗ್ರೆಸ್ 436083 ಮತಗಳ ಪಡೆದುಕೊಂಡಿದ್ದರು. ಈ ಮೂಲಕ ಬಹರಂಪುರ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರಸ್ ಅಭ್ಯರ್ಥಿ ಯೂಸುಫ್ ಪಠಾಣ್ ಬರೋಬ್ಬರಿ 80 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವಿನ ನಗೆಬೀರಿದ್ದಾರೆ. ಬಹರಂಪುರ ಲೋಕಸಭಾ ಕ್ಷೇತ್ರದ ಒಂಬತ್ತನೇ ಸುತ್ತಿನಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಪಠಾಣ್ 312220 ಮತಗಳನ್ನು ಪಡೆದಿದ್ದರು. ನಂಬರ್ ಎರಡರಲ್ಲಿದ್ದ ಬಿಜೆಪಿ ಅಭ್ಯರ್ಥಿಯಾ 251933 ಮತ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ 272272 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರು. ಕೊನೆಗೂ ಈ ಅಂಕಿಅಂಶದಲ್ಲಿ ಯಾವುದೇ ಬದಲಾವಣೆ ಆಗದೇ ಯೂಸಫ್ ಪಠಾಣ್ ಭರ್ಜರಿ ಗೆಲುವು ದಾಖಲಿಸಿದ್ದಾರೆ
ಕಾಂಗ್ರಸ್ ನಾಯಕನಿಗೆ ಶಾಕ್ ಕೊಟ್ಟ ಪಠಾಣ್:
ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಯೂಸುಫ್ ಪಠಾಣ್ ವಿರುದ್ಧ ಸ್ಪರ್ಧಿಸಿದ್ದರು. ಅಧೀರ್ ರಂಜನ್ ಅವರು 1999ರಿಂದ ನಿರಂತರವಾಗಿ ಈ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ, ಆದರೆ ಯೂಸುಫ್ ಪಠಾಣ್ ಈ ಬಾರಿ ಚಾಧರಿ ಓಟಕ್ಕೆ ಬ್ರೇಕ್ ಹಾಕಿದ್ದಾರೆ. ಇದೊಂದಿಗೆ ಯೂಸುಫ್‌ಗೆ ಐತಿಹಾಸಿಕ ಜಯದಕ್ಕಿದೆ. ಯೂಸುಫ್ ಗುಜರಾತ್ ನಿವಾಸಿಯಾಗಿದ್ದರೂ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆಲುವಿನ ನಗೆಬೀರಿದ್ದಾರೆ