ಮುಸ್ಲಿಂ ಸಮುದಾಯದ ಆರಾಧನಾ ಕೇಂದ್ರ ಮಸೀದಿಯ ಕುರಿತು ವಿರುದ್ಧ ದ್ವೇಷಪೂರಿತ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವ ಕುರಿತು.

 


ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರವು ಅಧಿಕಾರವನ್ನು ವಹಿಸಿದ ವಿಜಯೋತ್ಸವದ ಸಂದರ್ಭದಲ್ಲಿ ಬೋಳಿಯಾರಿನಲ್ಲಿ ನಡೆದ ಅಹಿತಕರ ಘಟನೆಯ ಸಂಬಂಧವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮರ ಆರಾಧನಾ ಕೇಂದ್ರವಾದ ಮಸೀದಿಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಸಲು ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದಾರೆ ಎಂಬ ದ್ವೇಷಪೂರಿತವಾದ ಹೇಳಿಕೆಗಳನ್ನು ನೀಡಿರುತ್ತಾರೆ ಇದು ಸಮಾಜದ ಸ್ವಾಸ್ಥ್ಯ ಕೆಡಿಸಿ ಜನರಲ್ಲಿ ಭಯ ಮತ್ತು ಆತಂಕ ಸೃಷ್ಟಿಸುವ ಈ ಹೇಳಿಕೆಯಾಗಿದ್ದು ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಇದರಿಂದ ಎರಡು ಕೋಮುಗಳ ನಡುವೆ ವೈ ಮನಸ್ಸು ಉಂಟು ಮಾಡುವ ಪ್ರಬದ್ಧ ಕೋಮುಗಲಭೆ ಸೃಷ್ಟಿ ಮಾಡಿ ರಾಜಕೀಯ ಲಾಭವನ್ನು ಪಡೆಯಲು ನಡೆಸಿದ ಸಂಚಿನ ಭಾಗವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ. ಆದ್ದರಿಂದ ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ಕೋಮುಗಲಭೆಗೆ ಪ್ರಚೋದನೆ ನೀಡುವ ಸಲುವಾಗಿ ಈ ರೀತಿ ದ್ವೇಷಪೂರಿತ ಹೇಳಿಕೆಯನ್ನು ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿ ವಿನಂತಿಸುತ್ತೇವೆ.










ನವೀನ ಹಳೆಯದು
WhatsApp Join our 'Shan Media News' WhatsApp group - Join Now ×