ಬಿಜೆಪಿಯ ನೂತನ ಸಂಸದೆ, ನಟಿ ಕಂಗನಾ ರನೌತ್‌ಗೆ ಸಿಐಎಸ್ಎಫ್ ಸಿಬ್ಬಂದಿಯಿಂದ ಕಪಾಳ ಮೋಕ್ಷ; ಆರೋಪ

 


ಬಾಲಿವುಡ್‌ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಬಗ್ಗೆ ಕಂಗನಾ ರನೌತ್‌ ಅವರೇ ಆರೋಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಾಲಿವುಡ್‌ ನಟಿ ಕಂಗನಾ ರನೌತ್‌ ಇತ್ತೀಚಿಗಷ್ಟೆ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.

ಕಂಗನಾಗೆ ಹಲ್ಲೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಚಂಡೀಗಢದಿಂದ ದೆಹಲಿಗೆ ಯುಕೆ707 ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×