ಮಂಗಳೂರು: ಡಿವೈಡರ್‌ಗೆ ಸ್ಕೂಟರ್‌ ಡಿಕ್ಕಿ; ಯುವಕ ಮೃತ್ಯು

 


ಮಂಗಳೂರು: ಮೇರಿಹಿಲ್‌ ಜಂಕ್ಷನ್‌ ಬಳಿ ಡಿವೈಡರ್‌ಗೆ ಸ್ಕೂಟರ್‌ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತ ಯುವಕ ಕಾವೂರು ಬೊಲ್ಪುಗುಡ್ಡೆ ನಿವಾಸಿ ನಿಶಾಂಕ್‌ ದೇವಾಡಿಗ (23) ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ ಸ್ಕೂಟರ್‌ನಲ್ಲಿ ವಿಮಾನ ನಿಲ್ದಾಣ ರಸ್ತೆಯ ಕೆಪಿಟಿ ಕಡೆಯಿಂದ ಪದವಿನಂಗಡಿ ಕಡೆಗೆ ಹೋಗುತ್ತಿದ್ದಾಗ ಮೇರಿಹಿಲ್‌ ಜಂಕ್ಷನ್‌ ಬಳಿಯ ನೆಕ್ಸಾ ಶೋರೂಂ ಎದುರುಗಡೆ ರಸ್ತೆ ನಡುವಿನ ಡಿವೈಡರ್‌ಗೆ ಸ್ಕೂಟರ್‌ ಡಿಕ್ಕಿಯಾಗಿದೆ‌ ಎಂದು ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ನಿಶಾಂಕ್‌ ಅವರ ತಲೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×