ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ವ್ಯಾಪಕ ಮಳೆಯಿಂದಾಗಿ ಪ್ರಾಕೃತಿಕ ವಿಕೋಪ ಸಂಭವಿಸಿ ಮುನ್ನೂರು ಗ್ರಾಮದ *ಕುತ್ತಾರು ಮದನಿ ನಗರದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು* ಸ್ಥಳಕ್ಕೆ ಸ್ಥಳೀಯ ಶಾಸಕ *ಸಭಾಧ್ಯಕ್ಷ ಯು ಟಿ ಖಾದರ್* ಭೇಟಿ ನೀಡಿ ಪರಿಶೀಲನೆ ನಡೆಸಿ,ಆಸ್ಪತ್ರೆಗೆ ಭೇಟಿ ನೀಡಿದ ಸಭಾಧ್ಯಕ್ಷರು ಮೃತರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.ನಂತರ ಪ್ರಾಕೃತಿಕ ವಿಕೋಪ ಸಂಭವಿಸಿದ ಕ್ಷೇತ್ರದ *ಮಂಜನಾಡಿ ಗ್ರಾಮದ ಕಲ್ಕಟ್ಟ,ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಉಚ್ಚಿಲ* ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಸಭಾಧ್ಯಕ್ಷರು *ಇಂದು ಕರೆದಿದ್ದ ಎಲ್ಲಾ ಸಭೆಗಳನ್ನು ರದ್ದು ಮಾಡಿ,* ಅಧಿಕಾರಿಗಳು ಆಯಾ ಗ್ರಾಮ ಪಂಚಾಯತ್,ಪಟ್ಟಣ ಪಂಚಾಯತ್,ಪುರಸಭೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಘಟನೆಗಳ ಕುರಿತಾಗಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.








