ಮೀನು ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆಯು ಜೂನ್ 24ರಂದು ಆದೇಶ ಹೊರಡಿಸಿದೆ.
ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಲಾಗಿತ್ತು
ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು.
