ಡೆಂಘೀ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ಯಲಹಂಕದಲ್ಲಿ ಶುಕ್ರವಾರ ಡೆಂಘೀ ಹಾಟ್ ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.
ಯಲಹಂಕದ ಶಿಂಗೇನಹಳ್ಳಿಯಲ್ಲಿ ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಘೀ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಘೀ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನೀರಿಕ್ಷೆ ಇದೆ” ಎಂದು ಹೇಳಿ ದರು.
.jpeg)