ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಪರಿಷತ್ತು (ಎನ್‌ಎಂಸಿ) 2024-25ನೇ ಸಾಲಿಗೆ ರಾಜ್ಯಕ್ಕೆ 5 ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡಿದೆ. ರಾಮನಗರ ಜಿಲ್ಲೆಗೆ ಒಟ್ಟೊಟ್ಟಿಗೆ ಎರಡು ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ದೊರೆತಿರುವುದು ವಿಶೇಷವಾಗಿದೆ.
ಈ ಕಾಲೇಜುಗಳ ಪಟ್ಟಿ ಹೀಗಿದೆ: ಕನಕಪುರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಆಸ್ಪತ್ರೆ, ರಾಮನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಪಿಇಎಸ್ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ (ಬೆಂಗಳೂರು), ಎಸ್.ಆರ್. ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ (ಬಾಗಲಕೋಟೆ), ಮತ್ತು ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ದಾಸನಪುರ-ನೆಲಮಂಗಲ).
