ಚಿತ್ರದುರ್ಗ: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯ, ಮಾಳಪ್ಪನಹಟ್ಟಿ ಸಮೀಪದ ಶಾಮರಾವ್ ಬಡಾವಣೆಯಲ್ಲಿ ನಡೆದಿದೆ.
ಓರ್ವ ಪುರುಷ ಮತ್ತು ಓರ್ವ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೊಳಲ್ಕೆರೆ ರಸ್ತೆಯ ಶಾಮರಾವ್ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿದೆ.
ಈ ಹಿನ್ನೆಲೆ ಡಿವೈಎಸ್ಪಿ ದಿನಕರ್, ಸಿಪಿಐ ಮುದ್ದುರಾಜ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿ ಮೂವರನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

