ಮಟನ್ ಮಾಂಸದ ಬಾಕ್ಸ್’ಗೆ ತಡೆವೊಡ್ಡಿ ಗುಲ್ಲೆಬ್ಬಿಸಿದ ಪುನೀತ್ ಕೆರೆಹಳ್ಳಿ; ರೋಲ್ ಕಾಲ್ ಮಾಡಲು ಬಂದಿದ್ದ ಎಂದ ಮಾಂಸ ವ್ಯಾಪಾರಿ!

 


ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮವೊಂದು ನಡೆದಿದ್ದು ಮಟನ್ ಮಾಂಸ್ ಬಾಕ್ಸ್ ತಡೆದು ಪುನೀತ್ ಕೆರೆಹಳ್ಳಿ‌ ಗುಲ್ಲೆಬ್ಬಿಸಿದ್ದಾನೆ. ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಸಾಕ್ಷ್ಯಾಧಾರ ರಹಿತ ಆರೋಪ ಮಾಡಿದ್ದಾನೆ.

ಇದಕ್ಕೆ ಪ್ರತಿಕ್ರಯಿಸಿದ ವ್ಯಾಪಾರಿ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್ಕಾಲ್ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇನ್ನು ಜೈಪುರಿಂದ ಬಂದ ಮಾಂಸದ ಬಗ್ಗೆ ವಾಗ್ದಾದ ನಡೆದಿರುವ ಮಧ್ಯ ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ಓಪನ್ ಮಾಡಿ ಪರಿಶೀಲನೆ ಮಾಡಿದ್ದಾರೆ. ಗುಣಮಟ್ಡ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್‌ ಆಗಿ ಪಡೆದಿದ್ದೇವೆ. ಇದನ್ನು ಲ್ಯಾಬ್ ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರುವುದಕ್ಕೆ 14 ದಿನಗಳ ಕಾಲವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್ ನಲ್ಲಿ ಗೊತ್ತಾಗುತ್ತೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೆ ಮಾಲೀಕ‌ನ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×