ಅಜೆಕಾರು : ರಿಕ್ಷಾ ಹಾಗೂ ಬೊಲೆರೊ ಪಿಕಪ್ ವಾಹನ ಡಿಕ್ಕಿಯಾಗಿ ಐವರು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರು ಕೈಕಂಬದ ಮಧುರಾಪಟ್ಟಣ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಹರೀಶ್(38ವ), ಲಲಿತ(62ವ), ಪ್ರೇಮಾ(58ವ), ಶಾರದಾ(52ವ) ಹಾಗೂ ಗೀತಾ(32ವ) ಗಾಯಗೊಂಡವರು.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೊಲೆರೊ ಚಾಲಕನ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
