ಎರಡು ಕಾರುಗಳ ನಡುವೆ ಭೀಕರ ಅಪಘಾತ: ಮೂವರು ಮೃತ್ಯು



ಶಿವಮೊಗ್ಗ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಮುದ್ದಿನಕೊಪ್ಪ ಲಯನ್‌ ಸಫಾರಿ ಬಳಿ ನಡೆದಿದೆ.



ಶಿವಮೊಗ್ಗದಿಂದ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಸ್ವಿಫ್ಟ್‌ ಕಾರು ನಡುವೆ ಅಪಘಾತ ಸಂಭವಿಸಿದೆ‌ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಎರಡು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×