ಭಾರೀ ಭೂಕುಸಿತಕ್ಕೆ ಮತ್ತೆ ನಲುಗಿದ ಶಿರಾಡಿ ಘಾಟ್: ಹಲ ವಾಹನಗಳು ಜಖಂ! ಶಿರಾಡಿ ಘಾಟ್ ರಸ್ತೆ ಸಂಪೂರ್ಣ ಬಂದ್!

 


ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ.

ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ವಿವರ ಇನ್ನಷ್ಟೇ ಲಭ್ಯವಾಗಿದೆ.

ಹೀಗೆ ಸಂಚರಿಸಿ:

ಮಂಗಳೂರು - ಬೆಂಗಳೂರು ಸಂಚಾರಕ್ಕೆ ಇದೀಗ ಶಿರಾಡಿ ಸಂಪೂರ್ಣ ಬಂದ್ ಆಗಿದೆ. ಆದ್ದರಿಂದ ತುರ್ತು ತೆರಳುವವರು ಸಂಪಾಜೆ - ಮಡಿಕೇರಿಯಾಗಿ ಅಥವಾ ಬೆಳ್ತಂಗಡಿ - ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ತೆರಳಬಹುದು ಎಂದು ಮಾಹಿತಿ ಲಭ್ಯವಾಗಿದೆ.


ನವೀನ ಹಳೆಯದು
WhatsApp Join our 'Shan Media News' WhatsApp group - Join Now ×