ಮಂಗಳೂರು,: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ಪ್ರಾಯವಾಗಿತ್ತು.
ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ಇಂದು ಅಪರಾಹ್ನ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸಯ್ಯಿದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ ಸ್ತಂಭನ ಆಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಅಪರಾಹ್ನ 2 ಗಂಟೆಯ ವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತರಲಾಗುತ್ತದೆ. ಅಲ್ಲಿ ಸಂಜೆ 5 ಗಂಟೆಯ ವರೆಗೆ ಸಾರ್ವಜನಿಕರಿಗೆ ಅಂತಿದ ದರ್ಶನಕ್ಕೆ ಅವಕಾಶ ಇರಲಿದೆ. ಆ ಬಳಿಕ ಕೂರತ್ ಗೆ ಕೊಂಡೊಯ್ದು, ಅಲ್ಲಿ ದಫನ ಕಾರ್ಯ ನೆರವೇರಲಿದೆ.
ಸಂತಾಪ: ಖಾಝಿ ಕೂರತ್ ತಂಙಳ್ ನಿಧನಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಸಿದ್ದಾರೆ.
ಸಯ್ಯದ್ ಕೂರತ್ ತಂಞಳ್ ಅವರ ಅಂತ್ಯ ಸಂಸ್ಕಾರ ವಿವರ
ಅಪರಾಹ್ನ 2 ಗಂಟೆಯವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನ
ಬಳಿಕ ಪಾರ್ಥಿವ ಶರೀರವನ್ನು ಸಂಜೆ 7 ಗಂಟೆಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರದಲ್ಲಿ ಸಾವ೯ಜನಿಕ ದಶ೯ನ.
ರಾತ್ರಿ 9 ಗಂಟೆಗೆ ಕೂರತ್ ನಲ್ಲಿ ಅಂತ್ಯ ಸಂಸ್ಕಾರ
ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್
ಅಧ್ಯಕ್ಷರು
ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ
