ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ

 


ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ.

ಇದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×