ಮಂಗಳೂರು, ಜು.9: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಿರಂತರವಾಗಿ ಸುರಿದ ಭಾರೀ ಮಳೆಗೆ ಅಪಾರ ಹಾನಿಯಾಗಿದೆ. ಜಿಲ್ಲೆಯಲ್ಲಿ ಗಣನೀಯ ಪ್ರಮಾಣದ ಮಳೆಯಾಗಿದ್ದು, ಉಜಿರೆಯಲ್ಲಿ 142 ಮಿಮೀ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 9 ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನು ಓದಿ :-ಪೇಪರ್ ಕಪ್ ನಲ್ಲಿ ಟೀ ಕುಡಿಯುವುದು ಎಷ್ಟೊಂದು ಹಾನಿಕಾರಕ ಗೊತ್ತಾ?
ಬೆಳ್ತಂಗಡಿ ತಾಲೂಕಿನ ಕಲ್ಲೇರಿಯಲ್ಲಿ ಶಾಲೆಯ ಕಾಂಪೌಂಡ್ ಗೋಡೆ ಕುಸಿದಿದ್ದು, ನಾವೂರಿನಲ್ಲಿ ದೇವಸ್ಥಾನದ ಕಾಂಪೌಂಡ್ ಗೋಡೆಯೂ ಬಿದ್ದಿದೆ. ಮಂಗಳೂರು ನಗರದ ಬಲ್ಲಾಳ್‌ಬಾಗ್‌ನಲ್ಲಿ ಮನೆಗೆ ಹಾನಿಯಾಗಿದ್ದು, ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತಗೊಂಡಿದೆ.
Ad
ಸೋಮೇಶ್ವರ ಪುರಸಭೆಯಲ್ಲಿ ದೊಡ್ಡ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಆ ವೇಳೆ ವಾಹನದೊಳಗೆ ಯಾರೂ ಇರಲಿಲ್ಲ.
