KARNATAKA HEAVY RAIN – ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ


ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ನಿರಂತರ ಮಳೆಯಿಂದ ಅವಘಡಗಳು ಸಂಭವಿಸುತ್ತಲೇ ಇದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವ್ಯಾಪಕ ಮಳೆಯ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಡಿಸಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ನಾಳೆ ಶಾಲೆಗಳಿಗೆ ರಜೆ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.



ಹಾವೇರಿ ಜಿಲ್ಲಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯಿತ್ತಿದೆ. ಈ ಹಿನ್ನೆಲೆ ಜಿಲ್ಲೆಯಾದ್ಯಂತ ಜುಲೈ 26 ಮತ್ತು 27 ಎರಡು ದಿನ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿ ಮಾತ್ರ ರಜೆ ನೀಡಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಆದೇಶಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

CHIKKAMAGALURU | ಜಿಲ್ಲೆಯಾದ್ಯಂತ ಬಿರುಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ – ಪ್ರೌಢ ಶಾಲೆಗಳಿಗೆ ಜು.26ರ ಶುಕ್ರವಾರ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.



ನವೀನ ಹಳೆಯದು
WhatsApp Join our 'Shan Media News' WhatsApp group - Join Now ×