ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ರಿಲೀಫ್; ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮ



ಮಂಗಳೂರು: ಮುಡಾ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮತ್ತೊಂದೆಡೆ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ನಾಳೆ ನಡೆಯಬೇಕಿದ್ದ ವಿಚಾರಣೆಯಿಂದ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×