ಪುತ್ತೂರು: ಮಾಣಿ-ಮೈಸೂರು ಹೆದ್ದಾರಿ ತಡೆಗೊಳಿಸಿ ಗುಡ್ಡ ಕುಸಿತ, ವಾಹನ ಸಂಚಾರಕ್ಕೆ ತೊಂದರೆ

 


ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಬೈಪಾಸ್ ತೆಂಕಿಲದಲ್ಲಿ ರಸ್ತೆಗೆ ಅಡ್ಡವಾಗಿ ಗುಡ್ಡ ಕುಸಿದು ಬಿದ್ದ ಘಟನೆ ಇಂದು ನಸುಕಿನ ಜಾವ ನಡೆದಿದೆ.

ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದ್ದು, ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಬೈಪಾಸ್ ಬಂದ್ ಆಗಿದೆ.

ಮಾಣಿ – ಮೈಸೂರು ಹೆದ್ದಾರಿಯ ಪುತ್ತೂರಿನ ತೆಂಕಿಲದಲ್ಲಿ ರಸ್ತೆ ಕುಸಿತ ಉಂಟಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಗುಡ್ಡ ಕುಸಿತ ಉಂಟಾಗಿದೆ. ಈ ಬಾರಿ ಮಾತ್ರ ಭಾರೀ ಪ್ರಮಾಣದಲ್ಲಿ ಗುಡ್ಡದ ಮಣ್ಣು ರಸ್ತೆ ಮೇಲೆ ಬಿದ್ದಿದೆ

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×