ಮಂಗಳೂರು :- ಅಲೋಶಿಯಸ್ ಕಾಲೇಜು ಮುಂಭಾಗ ವಿದ್ಯಾರ್ಥಿಗಳ ನಡುವಿನ ಹೊಡೆದಾಟ , ವಿಡಿಯೋ ವೈರಲ್

 


ಮಂಗಳೂರು: ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿಗಳ ನಡುವೆ ಹಿಗ್ಗಾಮುಗ್ಗಾವಾಗಿ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×