ರಾಜಭವನ ಬಿಜೆಪಿ ಕಚೇರಿಯಾಗಿದೆ ರಾಜ್ಯಪಾಲರು ಕೇಂದ್ರ ಸರಕಾರದ ರಬ್ಬರ್ ಸ್ಟಾಂಪ್ ಆಗಿದ್ದಾರೆ



ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು  ಖಂಡನೀಯ ವಾಗಿದೆ ಎಂದು ಕಾಂಗ್ರೇಸ್ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ವಹಾಬ್ ಕುದ್ರೋಳಿ  ಕಿಡಿಕಾರಿದ್ದಾರೆ.ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ.ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ರೂಪಿಸುತ್ತಿರುದು ಖಂಡನೀಯ” ಎಂದು ವಹಾಬ್ ಕುದ್ರೋಳಿ ಹೇಳಿದರು.  “ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ‌ ಕೋರಿ ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿದ್ದೌವು ಅವುಗಳನ್ನು ಲೆಕ್ಕಕ್ಕೆ ತೆಗೆಯದ ಅವರು,‌ ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ” ಎಂದು ವಹಾಬ್ ಕುದ್ರೋಳಿ ಆರೋಪಿಸಿದ್ದಾರೆ .
ನವೀನ ಹಳೆಯದು
WhatsApp Join our 'Shan Media News' WhatsApp group - Join Now ×