BREAKING: ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ



ಬೆಂಗಳೂರು: ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

ಎರಡು ವಾರಗಳ ಹಿಂದೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸಂದರ್ಶನ ನಡೆಸಿದ್ದ ಕಾಂಗ್ರೆಸ್ ಹೈಕಮಾಂಡ್, ಅಂತಿಮವಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷೆಯಾಗಿ ಅವಕಾಶ ಮಾಡಿಕೊಟ್ಟಿದೆ. ಸೌಮ್ಯ ರೆಡ್ಡಿ ಒಂದು ಬಾರಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂ.‌ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ, ತೇಜಸ್ವಿ ಸೂರ್ಯ ವಿರುದ್ಧ ಪರಾಜಿತಗೊಂಡಿದ್ದರು. ಇದೀಗ ಕರ್ನಾಟಕ ಜೊತೆಗೆ ಚಂಡಿಗಡ ಮತ್ತು ಅರುಣಾಚಲ ಪ್ರದೇಶ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×