Kasaragod ಕಾಸರಗೋಡು ಕಾರು ಅಪಘಾತ: ಎನ್‌ಐಟಿಕೆ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ!!

 


ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರಿಬುದ್ದೀನ್ (21) ಮೃತರು. ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದು ಧರೆಗೆ ಬಡಿದಿದೆ.

ರಾಜಾಪುರ ಠಾಣೆ ಪೊಲೀಸರು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.


ನವೀನ ಹಳೆಯದು
WhatsApp Join our 'Shan Media News' WhatsApp group - Join Now ×